ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ನಟ ಧ್ರುವಸರ್ಜಾ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ತಂದೆ ಹಾಗೂ ಸ್ನೇಹಿತರ ಜೊತೆ ಹಾಸನಾಂಬ ದೇವಾಲಯಕ್ಕೆ ಆಗಮಿಸಿದ ಧ್ರುವಸರ್ಜಾ ಅವರು ಸರತಿ ಸಾಲಿನಲ್ಲಿ ಬಂದು ದೇವಸ್ಥಾನದ ಬಳಿ ಬರುತ್ತಿದ್ದಂತೆ ಸರತಿ ಸಾಲಿನಿಂದ ಹೊರಬಂದು ನಂತರ ಮುಖ್ಯದ್ವಾರದ ಮೂಲಕ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು.
ಇನ್ನು ಹಾಸನಾಂಬೆ ದರ್ಶನಕ್ಕೆ ಇಂದು ಕಡೆಯ ದಿನವಾಗಿದ್ದು, ಹಿಂದೆಂದೂ ಕಾಣದಷ್ಟು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ನಾಳೆ ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ಮುಚ್ಚಲಿದ್ದು, ಇಂದು ಕೂಡ ದೇವಾಲಯಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ.





