ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ನಟ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಆಗಮಿಸಿ ದೇವಿಯ ದರ್ಶನ ಪಡೆದುಕೊಂಡರು.
ಕಾಂತಾರ ಸಕ್ಸಸ್ ಬಳಿಕ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ರಿಷಬ್ ಶೆಟ್ಟಿ ಅವರು, ಇಂದು ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಕುಟುಂಬ ಸಮೇತರಾಗಿ ದೇವಾಲಯಕ್ಕೆ ಆಗಮಿಸಿದ್ದ ರಿಷಬ್ ಶೆಟ್ಟಿ ಅವರನ್ನು ನೋಡಿ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.





