ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ದಂಪತಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಹಾಸನಾಂಬೆ ದರ್ಶನೋತ್ಸವದ 10ನೇ ದಿನವಾದ ಇಂದು ದೇವಾಲಯಕ್ಕೆ ಆಗಮಿಸಿದ ನಟ ಶಿವರಾಜ್ ಕುಮಾರ್ ದಂಪತಿ ಹಾಸನಾಂಬೆ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ನೆಚ್ಚಿನ ನಟನನ್ನು ನೋಡಿ ಅಭಿಮಾನಿಗಳು ಜೈಕಾರ ಹಾಕಿದರು. ಈ ವೇಳೆ ಶಿವರಾಜ್ ಕುಮಾರ್ ಕೈ ಬೀಸಿದರು





