ಹಾಸನ

ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ: ಎಚ್.ವಿಶ್ವನಾಥ್‌ ಬೇಸರ

ಹಾಸನ: ಹೊಗಳಿಕೆಯಿಂದ ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ ಎಂದು ವಿಧಾನಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್‌ ಬೇಸರ ಹೊರಹಾಕಿದ್ದಾರೆ.

ಈ ಬಗ್ಗೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಮಾತನಾಡಿದ ಅವರು, ಹೊಗಳಿಕೆಯಿಂದ ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಾದ, ವಿವಾದ, ಪ್ರತಿವಾದ ಟೀಕೆ ಸಹಜ. ಅದು ಇಲ್ಲದೇ ಇದ್ದರೇ ಚಮಚಾಗಿರಿ ಮಾಡಿಕೊಂಡು ಕೂರಬೇಕಾಗುತ್ತದೆ. ಯಾರನ್ನೋ ಮೆಚ್ಚಿಸಲು ನೀನು ಸತ್ಯವಂತ ಎಂದು ಹೇಳೋದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಭ್ರಷ್ಟನನ್ನು ಭ್ರಷ್ಟ ಎಂದೇ ಹೇಳಬೇಕು. ಹಾಗೆ ಹೇಳಿದರೆ ವಿಶ್ವನಾಥ್‌ ಎಲ್ಲರ ಬಗ್ಗೆನೂ ಮಾತನಾಡುತ್ತಾನೆ ಅಂತಾರೆ. ಜನತಂತ್ರ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಇಲ್ಲದೇ ಬರೀ ಹೊಗಳಿಕೆ ಇದ್ದರೆ ಹೇಗೆ.? ಎಲ್ಲಾ ರಾಜಕೀಯ ಪಕ್ಷಗಳು ಹೊಗಳಿಕೆಯಿಂದಲೇ ಹಾಳಾಗಿ ಹೋಗಿವೆ. ಒಂದು ಪಕ್ಷದ ಕಾರ್ಯಕರ್ತರು ನಾಯಕ ಏನೇ ತಪ್ಪು ಮಾಡಿದರೂ ಅವನನ್ನು ಹೊಗಳುತ್ತಾರೆ. ನೀನು ತಪ್ಪು ಮಾಡಿದ್ದೀಯ ಅಂತ ಹೇಳುವುದಿಲ್ಲ. ಹಾಗಾಗಿ ಇವತ್ತು ಪಕ್ಷ ರಾಜಕಾರಣ ಹಾಳಾಗಿದೆ ಎಂದು ಅಸಮಾಧಾನ ಹೊರಹಾಕಿದರು.

ಇಂದು ಹೊಗಳುವಿಕೆಯಿಂದ ಪಕ್ಷ ರಾಜಕಾರಣ ಹಾಳಾಗಿ, ವ್ಯಕ್ತಿ ರಾಜಕಾರಣ ಮೆರೆಯುತ್ತಿದೆ. ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ ಹೀಗೆ ವ್ಯಕ್ತಿ ರಾಜಕಾರಣ ಶುರುವಾಗಿದೆ. ದೇಶದಲ್ಲೇ ಈಗ ಪಕ್ಷ ರಾಜಕಾರಣ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

2 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

7 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

7 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

7 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

7 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

7 hours ago