ಹಾಸನ: ಇನ್ನೆರಡು ತಿಂಗಳಿನಲ್ಲಿ ಏನು ಬೇಕಾದರೂ ಆಗಬಹುದು ಎಂದು ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಪುನರುಚ್ಚರಿಸಿದ್ದಾರೆ.
ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ವೈಯಕ್ತಿಕ ಅಭಿಪ್ರಾಯಗಳಿಗೆ ಮಹತ್ವವಿದ್ದು, ತಮ್ಮ ಅಭಿಪ್ರಾಯಗಳನ್ನು ಪಕ್ಷ ಹಾಗೂ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಮುಂದುವರಿದು ಮಾತನಾಡಿದ ಅವರು, ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುರ್ಜೇವಾಲಾ ಅವರ ಕಾರ್ಯವೈಖರಿಯಲ್ಲಿ ವಿಶೇಷತೆ ಹುಡುಕಬಾರದು. ಸೆಪ್ಟೆಂಬರ್‌ಗೆ ಇನ್ನೂ ಎರಡು ತಿಂಗಳು ಬಾಕಿಯಿದೆ. ಆಗ ನೋಡೋಣ ಎಂದು ಹೇಳಿದ್ದಾರೆ.
ನಾನು ಹೇಳಿರೋದು ಸೆಪ್ಟೆಂಬರ್‌ಗೆ ಅಲ್ವಾ, ಈಗ ನಾವೆಲ್ಲಾ ಇನ್ನೂ ಕೂಡ ಜುಲೈನಲ್ಲಿದ್ದೇವೆ. ಈಗಲೇ ಎಲ್ಲವನ್ನೂ ಹೇಳಿಬಿಟ್ಟರೆ ನಿಮಗೆ ಆಸಕ್ತಿ ಕಡಿಮೆಯಾಗಿಬಿಡುತ್ತದೆ. ಇನ್ನೂ ಎರಡು ತಿಂಗಳು ಬಾಕಿಯಿದೆ. ಅಷ್ಟರಲ್ಲಿ ದೇಶವನ್ನೇ ತಲೆಕೆಳಗಾಗಿಸಬಹುದು ಎಂದು ಉತ್ತರಿಸಿದ್ದಾರೆ.