ಹಾಸನ

ಇನ್ನೆರಡು ತಿಂಗಳಿನಲ್ಲಿ ಏನು ಬೇಕಾದ್ರೂ ಆಗಬಹುದು: ಸಚಿವ ಕೆ.ಎನ್.ರಾಜಣ್ಣ ಪುನರುಚ್ಛಾರ

ಹಾಸನ: ಇನ್ನೆರಡು ತಿಂಗಳಿನಲ್ಲಿ ಏನು ಬೇಕಾದರೂ ಆಗಬಹುದು ಎಂದು ಸೆಪ್ಟೆಂಬರ್‌ ಕ್ರಾಂತಿ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಪುನರುಚ್ಚರಿಸಿದ್ದಾರೆ.

ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ವೈಯಕ್ತಿಕ ಅಭಿಪ್ರಾಯಗಳಿಗೆ ಮಹತ್ವವಿದ್ದು, ತಮ್ಮ ಅಭಿಪ್ರಾಯಗಳನ್ನು ಪಕ್ಷ ಹಾಗೂ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುರ್ಜೇವಾಲಾ ಅವರ ಕಾರ್ಯವೈಖರಿಯಲ್ಲಿ ವಿಶೇಷತೆ ಹುಡುಕಬಾರದು. ಸೆಪ್ಟೆಂಬರ್‌ಗೆ ಇನ್ನೂ ಎರಡು ತಿಂಗಳು ಬಾಕಿಯಿದೆ. ಆಗ ನೋಡೋಣ ಎಂದು ಹೇಳಿದ್ದಾರೆ.

ನಾನು ಹೇಳಿರೋದು ಸೆಪ್ಟೆಂಬರ್‌ಗೆ ಅಲ್ವಾ, ಈಗ ನಾವೆಲ್ಲಾ ಇನ್ನೂ ಕೂಡ ಜುಲೈನಲ್ಲಿದ್ದೇವೆ. ಈಗಲೇ ಎಲ್ಲವನ್ನೂ ಹೇಳಿಬಿಟ್ಟರೆ ನಿಮಗೆ ಆಸಕ್ತಿ ಕಡಿಮೆಯಾಗಿಬಿಡುತ್ತದೆ. ಇನ್ನೂ ಎರಡು ತಿಂಗಳು ಬಾಕಿಯಿದೆ. ಅಷ್ಟರಲ್ಲಿ ದೇಶವನ್ನೇ ತಲೆಕೆಳಗಾಗಿಸಬಹುದು ಎಂದು ಉತ್ತರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

22 seconds ago

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

12 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

13 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

16 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

18 hours ago