ಹಾಸನ: ಮುಂದಿನ ವಿಧಾನಸಭೆ ಚುನಾವಣೆ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದವರು ನಿರುದ್ಯೋಗಿಗಳಾಗುತ್ತಾರೆ ಎನ್ನಲು ಮತದಾರರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೇಬಿನಲ್ಲಿದ್ದಾರೆಯೇ ಎಂದು ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ಪ್ರಶ್ನಿಸಿದ್ದಾರೆ.
ಚುನಾವಣೆಯಲ್ಲಿ ಮತ ಹಾಕುವುದು ಜಿಲ್ಲೆಯ ಹಾಗೂ ನಾಡಿನ ಜನರು. ಅವರೆಲ್ಲಾ ಕಟೀಲ್ ಅವರ ಹಿಡಿತದಲ್ಲಿ ಇದ್ದಾರೆಯೇ ಎಂಬುದನ್ನು ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಲಿ” ಎಂದು ಟಾಂಗ್ ನೀಡಿದ್ದಾರೆ.
ರಾಷ್ಟ್ರೀಯವಾದಿ ಹೆಸರಿನಲ್ಲಿ ಬಿಜೆಪಿ ಯವರು ಮಾಡುತ್ತಿರುವ ಕೋಮುವಾದ, ದ್ವೇಷ ರಾಜಕೀಯ, ಆಪರೇಷನ್ ಕಮಲ ದಂತಹ ರಾಜಕಾರಣ ವನ್ನು ಜೆಡಿಎಸ್ ನಾಯಕರು ಎಂದೂ ಮಾಡಿಲ್ಲ. ವಿಶ್ವದಲ್ಲೇ ದೊಡ್ಡ ಪಾರ್ಟಿ ಎಂದುಕೊಳ್ಳುವ ಬಿಜೆಪಿಯವರು ಬೇರೆ ಪಕ್ಷಗಳಿಂದ ಅನೇಕರನ್ನು ಬಿಜೆಪಿಗೆ ಕರೆತರಲು ಅಡ್ಡ ರಾಜಕಾರಣ ಮಾಡುತ್ತಿರುವುದೇಕೆ? ಎಂದು ಪ್ರಶ್ನಿಸಿದರು.
ದೇವೇಗೌಡರು ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ನೀಡಿರುವ ಸ್ವಚ್ಛ ಹಾಗೂ ಪ್ರಾಮಾಣಿಕ ಆಡಳಿತದ ಬಗ್ಗೆ ನಾಡಿನ, ದೇಶದ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಧಿಕಾರ ನಡೆಸಿದ ಅವಧಿಯಲ್ಲಿಒಂದೇ ಒಂದು ಭ್ರಷ್ಟಾಚಾರದ ಕಪ್ಪು ಚುಕ್ಕೆ ಇಲ್ಲದಂತೆ ಅಧಿಕಾರ ನಡೆಸಿದ್ದಾರೆ. ಅಂಥವರ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ ಎಂದಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…