ಹಾಸನ: ಅರಸೀಕೆರೆ ನಗರಸಭೆ ವಾರ್ಡ್‌ಗಳ ಉಪಚುನಾವಣೆಯಲ್ಲಿ ಎಂಟು ಸ್ಥಾನಗಳ ಪೈಕಿ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.
ಈ ಮೂಲಕ ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲೂ ಕಾಂಗ್ರೆಸ್ ಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿಗೆ ಬಿಗ್ ಶಾಕ್ ನೀಡಿದೆ.
ಕಳೆದ ನವೆಂಬರ್.23ರಂದು ಅರಸೀಕೆರೆ ನಗರಸಭೆಯ 8 ವಾರ್ಡ್‌ಗಳಿಗೆ ಉಪಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಪ್ರಕಟವಾಗಿದೆ.
ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್ ಹಾಗೂ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ.
ಇದರೊಂದಿಗೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಮಾಜಿ ಸಚಿವ ಎಚ್.ಡಿ.ರೇವಣ್ಣರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.





