Mysore
17
overcast clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ನಾನೇ ಒಕ್ಕಲಿಗರು, ಬ್ರಾಹ್ಮಣರು, ಲಿಂಗಾಯತರ ನಿಗಮ ಹಣ ಬಳಸಿಕೊಳ್ಳಿ ಅಂತಾ ಹೇಳಿದ್ದೇನೆ ; ಆರ್.ಅಶೋಕ್ ಕಿಡಿ

ಹಾಸನ : ಒಕ್ಕಲಿಗರು, ಬ್ರಾಹ್ಮಣರು, ಲಿಂಗಾಯತರ ನಿಗಮ ಹಣವನ್ನೂ ಬಳಸಿಕೊಳ್ಳಿ ಅಂತಾ ಸರ್ಕಾರಕ್ಕೆ ಹೇಳಿದ್ದೇನೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಬಳಿಕ ಮಾತನಾಡಿದ ಅವರು, ಸರ್ಕಾರ ಸ್ಕ್ಯಾಂಡಲ್‌ ಗಳಲ್ಲಿ ಸಿಲುಕಿಗೊಂಡಿದೆ. ಅದರಿಂದ ಹೊರಬರಲು ಅವರಿಗೆ ಆಗ್ತಿಲ್ಲ. ಅದಕ್ಕೆ ಅದರಲ್ಲಿ ಬ್ಯುಸಿ ಇದ್ದಾರೆ. ನಾನು ಕಂದಾಯ ಸಚಿವನಾಗಿ ಮಳೆ ಹಾನಿಗೆ ತುರ್ತು ಪರಿಹಾರ ನೀಡಿದ್ದೆ. ಇಲ್ಲಿ ಪರಿಹಾರ ಕೊಡಲು ಇನ್ನು ಶುರು ಮಾಡಿಲ್ಲ. ಕೇಂದ್ರ ಸರ್ಕಾರ ಕೊಟ್ಟಿರುವ ಹಣವನ್ನು ಇವರು ಕೊಡುತ್ತಿದ್ದಾರೆ. ಕೇಂದ್ರ ಸರ್ಕಾರ ಕೊಟ್ಟಿರುವುದನ್ನು ನೀಡಿ ಕೈ ಚೆಲ್ಲಿ ಕೂರಬಾರದು. ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ ಸರ್ಕಾರ ಪಾಪರ್‌ ಆಗಿದೆ. ಕಳೆದ ಆರೇಳು ತಿಂಗಳಿಂದ ಅದೇ ಸ್ಥಿತಿಯಲ್ಲಿದೆ. ಈಗ ಗ್ಯಾರೆಂಟಿಗಾಗಿ ಟ್ಯಾಕ್ಸ್‌ ಹಾಕುತ್ತಿದ್ದಾರೆ. ದಲಿತರ ಹಣ ಉಪಯೋಗಿಸಿಕೊಂಡಿದ್ದಾರೆ. ಸರ್ಕಾರದ ಬಳಿ ಹಣ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಅಲ್ಲದೆ ಈ ಸರ್ಕಾರ ಪಾಪರ್‌ ಆಗಿದ್ದು, ಅವರ ಬಳಿ ದುಡ್ಡಿಲ್ಲ. ಎಸ್ಟಿಮೇಟ್‌ ಮಾಡದೇ ಗ್ಯಾರಂಟಿ ತಂದಿದ್ದಾರೆ. ಅದಕ್ಕೆ ಇವಾಗ ಹಣ ಹುಡುಕುತ್ತಿದ್ದಾರೆ. ನಾನೇ ಸರ್ಕಾರಕ್ಕೆ ಹೇಳಿದ್ದೇನೆ. ಒಕ್ಕಲಿಗರ ನಿಗಮ, ಬ್ರಾಹ್ಮಣರು, ಲಿಂಗಾಯಿತರ ನಿಗಮದ ಹಣ ಇದೆ ಎಲ್ಲವನ್ನೂ ಬಳಸಿಕೊಳ್ಳಿ. ಇಲ್ಲಾ ಅಂದರೆ ನಿಮ್ಮ ಬಾಳು ಬೀದಿಗೆ ಬರುತ್ತದೆ. ಈ ಸರ್ಕಾರ ಕೋಮಾಸ್ಟೇಜ್‌ ನಲ್ಲಿದೆ. ಅಲ್ಲದೆ ಈ ಸರ್ಕಾರ ಹಗರಣಗಳಲ್ಲಿ ಸಿಲುಕಿಕೊಂಡಿದೆ. ಹೊರಗಡೆ ಬರಲು ಆಗುತ್ತಿಲ್ಲ.  ದಾರಿ ಕೂಡ ಕಾಣದಾಗಿದೆ. ಎಲ್ಲಾ ದಲಿತರ ಹಣ ಉಪಯೋಗಿಸಿಕೊಳ್ಳುತ್ತಿದ್ದಾರೆ.  ವಾಲ್ಮೀಕಿ, ಮುಡಾ ದಲ್ಲೂ ದಲಿತರ ಹಣವೇ. ದಲಿತರ ಮೇಲೆ ಚಪ್ಪಡಿ ಎಳೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ರಾಜ್ಯ ಸರ್ಕಾರಕ್ಕೆ ಮರ್ಯಾದೆ ಇಲ್ಲ. ತಪ್ಪಿಸಿಕೊಳ್ಳುವ ದಾರಿ ಇಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Tags:
error: Content is protected !!