ಹಾಸನ: ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಆಟೋ ಚಾಲಕನನ್ನು ಬೇಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಹಿಂದೆ ಬಿದ್ದಿದ್ದ. ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆಕೆ ಪ್ರೀತಿಸಲು ನಿರಾಕರಿಸಿದ್ದಕ್ಕೆ ಅವಾಚ್ಯವಾಗಿ ನಿಂದಿನಿ, ರಸ್ತೆಯಲ್ಲಿ ಅಡ್ಡಟ್ಟಿ ಎಳೆದಾಟಿ ಹಿಂಸಿಸುತ್ತಿದ್ದನು.
ಇದನ್ನು ಓದಿ: ಹಾಸ್ಟಲ್‌ನ ಶೌಚಾಲಯದಲ್ಲಿ ಮಗುವಿಗೆ ಜನ್ಮನೀಡಿದ ಬಾಲಕಿ ; 6 ಮಂದಿ ವಿರುದ್ಧ ಎಫ್‌ಐಆರ್
ಆಟೋ ಚಾಲಕನ ಕಿರುಕುಳಕ್ಕೆ ಬೇಸತ್ತ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದಳು. ಪೋಷಕರು ಆಟೋ ಚಾಲಕನ ವಿರುದ್ಧ ದೂರು ನೀಡಿದ್ದು, ಸದ್ಯ ಆರೋಪಿ ಚಾಲಕನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಮನುಬ್ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ.





