ಹಾಸನ: ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆಟೋ ಚಾಲಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಸಿದ್ದೇಶ್ವರ ನಗರದ ನಿವಾಸಿ ಗೋವಿಂದ ಎಂಬುವವರೇ ಹೃದಯಾಘಾತದಿಂದ ನಿಧನರಾಗಿರುವ ದುರ್ದೈವಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಆಟೋ ಚಲಾಯಿಸಿಕೊಂಡು ಬರುವಾಗ ಗೋವಿಂದ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರು ಆಟೋವನ್ನು ಆಸ್ಪತ್ರೆ ಕಡೆಗೆ ತಿರುಗಿಸಿದ್ದಾರೆ. ಆದರೆ ಆಸ್ಪತ್ರೆಗೆ ಹೋಗಿದ ಕೆಲವೇ ಕ್ಷಣದಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕುಟುಂಬಕ್ಕೆ ಆಶ್ರಯವಾಗಿದ್ದ ಗೋವಿಂದರನ್ನು ಕಳೆದುಕೊಂಡು ಪತ್ನಿಯ ಆಕ್ರಂದನ ಮುಗಿಲುಮುಟ್ಟಿದೆ.





