Mysore
19
broken clouds

Social Media

ಶುಕ್ರವಾರ, 23 ಜನವರಿ 2026
Light
Dark

ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್

ಹಾಸನ : ಈ ಬಾರಿ ಮೈಸೂರು ದಸರಾ ಉದ್ಘಾಟನೆ ಮಾಡಿದ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ತಮ್ಮ ಕುಟುಂಬಸ್ಥರ ಜೊತೆ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ.

ಹಾಸನದ ಮುಸ್ಲಿಂ ಕುಟುಂಬದಲ್ಲಿ ಜನಿಸಿದ ಬಾನು ಮುಷ್ತಾಕ್ ಚಿಕ್ಕ ವಯಸ್ಸಿನಿಂದಲೇ ಸಾಹಿತ್ಯ ಮತ್ತು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದರು. ಪತ್ರಕರ್ತೆಯಾಗಿ, ನ್ಯಾಯವಾದಿಯಾಗಿ ಮತ್ತು ಹೋರಾಟಗಾರ್ತಿಯಾಗಿ ಅವರು ಕರ್ನಾಟಕದಲ್ಲಿ ಮೂಲಭೂತವಾದಿ ಚಿಂತನೆಗಳು ಮತ್ತು ಸಾಮಾಜಿಕ ಅನ್ಯಾಯಗಳ ವಿರುದ್ಧ ಹೋರಾಡಿದ್ದಾರೆ. ಇದೀಗ ಹಾಸನಾಂಬೆ ದೇವಿಯ ದರ್ಶನ ಪಡೆಯುವ ಮೂಲಕ ಅವರು ಕೋಮು ಸೌಹಾರ್ದತೆಯನ್ನು ಮೆರೆದಿದ್ದಾರೆ.

ಇದನ್ನು ಓದಿ: ಭಾವತಂತು ತುಂಡಾದಂತೆ ಭಾಸವಾಗುತ್ತಿದೆ…. ಭೈರಪ್ಪ ಕುರಿತು ಬಾನುಮುಷ್ತಾಕ್‌ ಬರಹ

ಬಾಲ್ಯದಿಂದಲೂ ಬರುತ್ತಿದ್ದೇನೆ
ನಾನು ಚಿಕ್ಕವಳಿದ್ದಾಗ ನನ್ನ ತಾಯಿಯ ಕೈ ಬೆರಳು ಹಿಡಿದು ಇಲ್ಲಿಗೆ ಬರುತ್ತಿದ್ದ ದಿನಗಳು ನೆನಪಾದವು. ಇವತ್ತು ನಿಮ್ಮ ಧ್ಯಾನಕ್ಕೆ ಬಿದ್ದಿದ್ದೇನೆ. ಹಿಂದೆ ಮುಸ್ಲಿಂ ಸಮುದಾಯವೂ ಹಾಸನಾಂಬೆಯನ್ನು ಪೂಜಿಸುತ್ತಿದ್ದರು. ನಮ್ಮ ತಾಯಿಯ ಕಾಲದಲ್ಲಿ ದೇವಿಯನ್ನು ಹಸನ್ ಬಿ ಹುಸೇನ್ ಬೀ ಎಂಬ ನಂಬಿಕೆಯಲ್ಲಿ ಪರಿಚಯಿಸುತ್ತಿದ್ರು. ಆ ಕಾಲದಲ್ಲಿ ಮುಸ್ಲಿಂ ಪೂಜೆಯಂತೆ ಸಕ್ಕರೆ ಊದಿನ ಕಡ್ಡಿ ತಂದು ದೇವಿಗೆ ಪೂಜಿಸುತ್ತಿದ್ರು. ಅಂದು ಹೆಚ್ಚಿನ ಮುಸ್ಲಿಂ ಇಲ್ಲಿಗೆ ಬರುತ್ತಿದ್ದರು.. ಈಗಲೂ ಕೆಲವರು ಬರ್ತಾರೆ. ಹಾಸನಾಂಬೆ ಒಂದು ಉತ್ತಮ ಭಾವೈಕ್ಯತಾ ಜಾಗ. ಇದು ನಮ್ಮ ಊರ ಹಬ್ಬ. ನಾವೆಲ್ಲಾ ಈ ದೇವಿ ಜಾತ್ರೆಯಲ್ಲಿ ಸಂಭ್ರಮದಿಂದ ಭಾಗಿಯಾಗಬೇಕು ಎಂದರು.

ಈ ದಿನಗಳಲ್ಲಿ ದೇವಾಲಯದಲ್ಲಿ ನಡೆಯುವ ವಿಶೇಷ ಪೂಜೆಗಳಲ್ಲಿ ಭಾಗವಹಿಸಿ, ಅವರು ತಮ್ಮ ಭಾವುಕತೆಯನ್ನು ವ್ಯಕ್ತಪಡಿಸಿದ್ದಾರೆ. ಈ ದರ್ಶನವು ನನಗೆ ಆಂತರಿಕ ಶಾಂತಿಯನ್ನು ನೀಡಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಬುಧವಾರ ಒಂದೇ ದಿನ ಭಕ್ತರ ಸಂಖ್ಯೆ ೨.೫೦ ಲಕ್ಷ ದಾಟಬಹುದು ಎಂದ ಅವರು ಎಷ್ಟೇ ಜನ ಬಂದರೂ ಎಲ್ಲರಿಗೂ ಸುಗಮ ದರ್ಶನ ಆಗಲಿದೆ. ಎಲ್ಲಾ ವ್ಯವಸ್ಥೆ ಸರಿಯಾಗಿದ್ದು ದರ್ಶನ ಪಡೆಯಲು ಜನರಿಗೆ ಸ್ವಲ್ಪ ಸಮಯ ಹೆಚ್ಚಾಗಲಿದೆ. ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕು ಗಂಟೆ ಸಮಯ ತಗುಲುತ್ತಿದ್ದು ಮುಂದಿನ ದಿನಗಳಲ್ಲಿ ಬರುವವರು ನಾಲ್ಕರಿಂದ ಐದು ಗಂಟೆ ಸರತಿ ಸಾಲಿನಲ್ಲಿ ನಿಲ್ಲಲು ತಯಾರಾಗಿ ಬನ್ನಿ ಎಂದರು.

Tags:
error: Content is protected !!