ಹಾಸನ

ಸಕಲೇಶಪುರ ತಹಶೀಲ್ದಾರ್ ಕಚೇರಿಯ ವಾಹನ, ಪೀರೋಪಕರಣ ಜಪ್ತಿ

ಹಾಸನ : ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡಿ ೭ ವರ್ಷ ಕಳೆದರೂ ಸಹ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ  ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ತಹಶೀಲ್ದಾರ್‌ ಕಚೇರಿಯ ವಾಹನ, ಪೀರೋಪಕರಣಗಳನ್ನ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿದೆ.

೧೯೯೪ರಲ್ಲಿ ಬೇಲೂರು ಚೆನ್ನಕೇಶವ ದೇವಾಲಯಕ್ಕೆ ಹೊಂದಿಕೊಂಡಿದ್ದಿದ್ದ ಸುದೀಂದ್ರ ಹಾಗೂ ರಾಮು  ಎಂಬುವವರ ೮೦೦ ಚದರ ಅಡಿ ಭೂಮಿಯನ್ನ ಹೋಟೆಲ್‌ ನಿರ್ಮಾಣಕ್ಕಾಗಿ ಪ್ರವಾಸೋಧ್ಯಮ ಇಲಾಖೆ ಭೂಸ್ವಾಧೀನ ಪಡಿಸಿಕೊಂಡಿತ್ತು. ಈ ವೇಳೆ ಪ್ರತಿ ಚದರ ಅಡಿಗೆ ಇಲಾಖೆ ೨೭೭ ರೂಗಳಂತೆ ಪರಿಹಾರ ನೀಡಿತ್ತು. ಹೆಚ್ಚಿನ ಪರಿಹಾರ ನೀಡುವಂತೆ ಜಾಗದ ಮಾಲೀಕರು ನ್ಯಾಯಾಲಯದ ಮೋರೆ ಹೋಗಿದ್ದರು.

ಸುದೀರ್ಘವಾದ ವಿಚಾರಣೆ ನಂತರ ಚದರ ಅಡಿಗೆ ೯೫೦ ರೂ ನಂತೆ ೧.೭೫ ಕೋಟಿ ಪರಿಹಾರ ನೀಡಬೇಕು ಎಂದು ಅಂದಿನ ಭೂ ಸ್ವಾದೀನಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗೆ ನ್ಯಾಯಾಲಯ ಆದೇಶ ಮಾಡಿತ್ತು. ಈ ತೀರ್ಪು ಪ್ರಕಟಕೊಂಡು ೭ ವರ್ಷಗಳು ಕಳೆದರೂ ಪರಿಹಾರ ಮಾತ್ರ ನೀಡುತ್ತಿಲ್ಲ. ಹೀಗಾಗಿ ಉಪವಿಭಾಗಾಧಿಕಾರಿ ಕಚೇರಿ ಜಪ್ತಿಗೆ ಬೇಲೂರು ನ್ಯಾಯಾಲಯ ಆದೇಶ ಮಾಡಿತ್ತು. ಆದೇಶದ ಅನ್ವಯ ೨ ಲಾರಿಗಳಲ್ಲಿ ಅಧಿಕಾರಿಗಳು ಕಚೇರಿಯ ಪೀಠೋಪಕರಣಗಳನ್ನ ತುಂಬಿಕೊಂಡು ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಸೆರೆ

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…

25 mins ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ ಪ್ರಕರಣಗಳು: ಕಂಗಾಲಾದ ರೈತರು

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…

30 mins ago

ಓದುಗರ ಪತ್ರ:   ಜನೌಷಧ ಕೇಂದ್ರ: ಸುಪ್ರೀಂ ತೀರ್ಮಾನ ಸ್ವಾಗತಾರ್ಹ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…

36 mins ago

ಓದುಗರ ಪತ್ರ:  ಹೀಲಿಯಂ ಗ್ಯಾಸ್ ಬಲೂನ್ ಮಾರಾಟ ನಿಷೇಧಿಸಿ

ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…

59 mins ago

ಓದುಗರ ಪತ್ರ: ಯಥಾ ರಾಜ.. ತಥಾ ಅಧಿಕಾರಿ

‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…

1 hour ago

ಸೇವಾ ಕೈಂಕರ್ಯದ ಪ್ರತಿರೂಪ ಚೈತನ್ಯ ಚಾರಿಟಬಲ್ ಟ್ರಸ್ಟ್‌

ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…

2 hours ago