ಹಾಸನ: 112 ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ.
ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್ಸಿ ಓದುತ್ತಿದ್ದ ಶಶಾಂತ್ ಎಂಬಾತನೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶಶಾಂಕ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಶಶಾಂಕ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





