ಹಾಸನ : ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರೆತಿದ್ದರಿಂದ ತವರಿನಲ್ಲಿ ಸಂಭ್ರಮ ಮನೆ ಮಾಡಿದೆ.
ಹಾಸನ ನಗರದ ಪೆನ್ಷನ್ ಮೊಹಲ್ಲಾದ ಮನೆಯಲ್ಲಿ ಲೇಖಕಿ ಬಾನು ಮುಷ್ತಾಕ್ ಕುಟುಂಬದ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದರು.
ಪುತ್ರ ತಾಹೀರ್, ಸೊಸೆ ಯಾಸಿನ್ ಹಾಗೂ ಮೊಮ್ಮಗಳಿಗೆ ಪತಿ ಮುಷ್ತಾಕ್ ಸಿಹಿ ತಿನ್ನಿಸಿ ಸಂತಸ ಹಂಚಿಕೊಂಡರು.
ಸುದ್ದಿ ಹಿನ್ನೆಲೆ:- ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ
ಬಳಿಕ ಮಾತನಾಡಿದ ಅವರು, ಈ ಗೌರವ ಕರ್ನಾಟಕಕ್ಕೆ, ವಿಶೇಷವಾಗಿ ಹಾಸನ ಜಿಲ್ಲೆಗೆ ಸಿಕ್ಕಿರುವುದು ಅತೀವ ಸಂತೋಷದ ವಿಷಯ. ಇಂಗ್ಲೆಂಡ್‌ನಲ್ಲಿ ಪ್ರಶಸ್ತಿ ಘೋಷಣೆಯವರೆಗೂ ಕುತೂಹಲದಿಂದ ಕಾದಿದ್ದೆವು ಎಂದು ಹೇಳಿದರು.
ಇನ್ನೂ ವಕೀಲ ಸಂಘ ಸೇರಿದಂತೆ ನಗರದ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.





