ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.
ಚನ್ನರಾಯಪಟ್ಟಣ ತಾಲ್ಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಎಂಬುವವರೇ ಕಣ್ಮರೆಯಾಗಿರುವ ದುರ್ದೈವಿಗಳಾಗಿದ್ದಾರೆ.
ಇಬ್ಬರು ಹಾಸನ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿದ್ದರು. ಬಳಿಕ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಬೆಂಗಳೂರಿನಿಂದ ಬುಧವಾರ ಸ್ನೇಹಿತೆ ಮಿಲನ ಜೊತೆ ಬಸ್ ಹತ್ತಿ ಹೊರಟಿದ್ದರು. ಮಿಲನ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಇಬ್ಬರು ಕಣ್ಮರೆಯಾಗಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…