Mysore
27
broken clouds

Social Media

ಭಾನುವಾರ, 29 ಡಿಸೆಂಬರ್ 2024
Light
Dark

ಉಪಚುನಾವಣೆ ನಂತರ ಸರ್ಕಾರದಲ್ಲಿ ಬದಲಾವಣೆ: ಕೇಂದ್ರ ಸಚಿವ ಕುಮಾರಸ್ವಾಮಿ ಹೊಸ ಬಾಂಬ್‌

ಹಾಸನ: ಉಪಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾನು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೆ. ಆದ್ದರಿಂದ ನನ್ನನ್ನು ಚನ್ನಪಟ್ಟಣ ಜನತೆ ಆಯ್ಕೆ ಮಾಡಿದ್ದರು. ಈ ಬಾರಿಯೂ ಕೂಡ ನಿಖಿಲ್‌ ಕುಮಾರಸ್ವಾಮಿ ಅವರ ಕೈಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಉಪಚುನಾವಣೆ ಫಲಿತಾಂಶ ಬಂದ ನಂತರ ಸರ್ಕಾರದಲ್ಲಿ ಬದಲಾವಣೆ ಆಗಲಿದೆ. ಹಲವು ನಾಯಕರ ಭವಿಷ್ಯ ಕೂಡ ನಿರ್ಧಾರವಾಗಲಿದೆ ಎಂದು ಭವಿಷ್ಯ ನುಡಿದರು.

 

 

 

Tags: