ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಲಿಂಗಾಪುರ ಗ್ರಾಮದ ಬಳಿ ನಡೆದಿದೆ.
ಮಂಗಳೂರಿನಿಂದ ಬೇಲೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ರಸ್ತೆ ತಿರುವಿನಲ್ಲಿ ನಿಯಂತ್ರಣ ಸಿಗದೇ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ. ಪರಿಣಾಮ ಚಾಲಕ ಮಹಮ್ಮದ್ ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಅರೇಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.





