ಹಾಸನ: ಬೇಲೂರಿನಲ್ಲಿ ಗಣೇಶ ಮೂರ್ತಿಗೆ ಚಪ್ಪಲಿ ಹಾಕಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯಿಂದಲೇ ಕೃತ್ಯ ನಡೆದಿದೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಇಂದು ಬೆಳಿಗ್ಗೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದೆ.
ಕಿಡಿಗೇಡಿಗಳ ಕೃತ್ಯ ಖಂಡಿಸಿ ಸಾರ್ವಜನಿಕರು, ಭಕ್ತರು ದೇವಾಲಯದ ಬಳಿ ಪ್ರತಿಭಟನೆ ನಡೆಸಿ ತಕ್ಷಣ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದರು.
ಈ ನಡುವೆ ದೇವಸ್ಥಾನದ ಸಿಸಿ ಕ್ಯಾಮರಾವನ್ನು ಪರಿಶೀಲನೆ ನಡೆಸಿದಾಗ ಮಹಿಳೆಯೊಬ್ಬಳು ಮುಖ ಮುಚ್ಚಿಕೊಂಡು ದೇವಸ್ಥಾನಕ್ಕೆ ಆಗಮಿಸಿರುವ ದೃಶ್ಯ ಸೆರೆಯಾಗಿದೆ.
ಮಹಿಳೆಯೇ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದ್ದು, ಮುಖಮುಚ್ಚಿಕೊಂಡು ಬಂದಿದ್ದ ಮಹಿಳೆ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ದೇವರ ಮೇಲೆ ಇಟ್ಟಿರುವ ಅನುಮಾನ ವ್ಯಕ್ತವಾಗಿದೆ.
ದೇವಸ್ಥಾನಕ್ಕೆ ಮಹಿಳೆ ಎಂಟ್ರಿಯಾಗುವಾಗ ಆಕೆ ಕಾಲಿನಲ್ಲಿ ಚಪ್ಪಲಿ ಇತ್ತು. ಆದರೆ ದೇವಸ್ಥಾನದಿಂದ ವಾಪಸ್ ಹೋಗುವಾಗ ಕಾಲಿನಲ್ಲಿ ಚಪ್ಪಲಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳೆಯೇ ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾಕಿದ್ದಾಳೆ ಎಂಬ ಅನುಮಾನ ವ್ಯಕ್ತವಾಗಿದೆ.





