ಹಾಸನ : ಇಬ್ಬರು ವ್ಯಕ್ತಿಗಳ ನಡುವೆ ಮದ್ಯ ಕುಡಿಯುವ ಸ್ಪರ್ಧೆ ನಡೆದು ಮಿತಿ ಮೀರಿ ಕುಡಿದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಹೊಳೆನರಸೀಪುರದ ಸಿಗರನಹಳ್ಳಿಯಲ್ಲಿ ನಡೆದಿದೆ.
ಒಂದೇ ಗ್ರಾಮದ ಇಬ್ಬರು ವ್ಯಕ್ತಿಗಳ ನಡುವೆ ಅರ್ಧ ಗಂಟೆಯಲ್ಲಿ ಒಂದು ಲೀಟರ್ ಮದ್ಯ ಕುಡಿಯುವ ಸ್ಪರ್ಧೆ ಏರ್ಪಟ್ಟಿದೆ. ಸ್ಪರ್ಧೆಯಲ್ಲಿ ಹೆಚ್ಚು ಮದ್ಯ ಸೇವನೆ ಮಾಡಿದ ತಿಮ್ಮೇಗೌಡ (60) ಎಂಬಾತ ಸಾವಿಗೀಡಾಗಿದ್ದಾರೆ. ಮೃತ ತಿಮ್ಮೇಗೌಡ ಹಾಗೂ ದೇವರಾಜ ನಡುವೆ ಈ ಸ್ಪರ್ಧೆ ಏರ್ಪಟ್ಟಿತ್ತು. ಈ ಇಬ್ಬರಿಗೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕೃಷ್ಣೇಗೌಡ ಮದ್ಯದ ಪ್ಯಾಕೆಟ್‍ಗಳನ್ನು ನೀಡಿದ್ದರು ಎನ್ನಲಾಗಿದೆ.
ತಿಮ್ಮೇಗೌಡನಿಗೆ ಮದ್ಯ ವಿಪರೀತವಾಗುತ್ತಿದ್ದಂತೆ ಬಾಯಲ್ಲಿ ರಕ್ತ ಬರಲಾರಂಭಿಸಿದೆ. ಬಳಿಕ ದೇವರಾಜು ಮತ್ತು ಕೃಷ್ಣೇಗೌಡ ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ಅಸ್ವಸ್ಥವಾಗಿ ಬಿದ್ದಿದ್ದ ಆತನನ್ನು ಗ್ರಾಮಸ್ಥರು ಎತ್ತಿಕೊಂಡು ಬಂದು ಮನೆಯಲ್ಲಿ ಮಲಗಿಸಿದ್ದರು. ಈ ವೇಳೆ ತಿಮ್ಮೇಗೌಡ ಸಾವಿಗೀಡಾಗಿದ್ದಾರೆ.
ಈ ಸಂಬಂಧ ತಿಮ್ಮೇಗೌಡನ ಪುತ್ರಿ, ದೇವರಾಜು ಹಾಗೂ ಕೃಷ್ಣೇಗೌಡನ ವಿರುದ್ಧ ದೂರು ದಾಖಲಿಸಿದ್ದಾರೆ. ಅಲ್ಲದೇ ಅಕ್ರಮ ಮದ್ಯ ಮಾರಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…
ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…
ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…
ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…