ಹಾಸನ

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್ ಸರ್ಕಾರ ಮಾತ್ರ ಕೊಟ್ಟ ಮಾತಿನಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹಾಸನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಸನ ವತಿಯಿಂದ ಆಯೋಜಿಸಲಾದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಇಂದು ಸುಮಾರು 298 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಲಾಗಿದೆ. ಹಾಸನ ಜಿಲ್ಲೆಯ ರಾಜಕೀಯ ಚಿತ್ರಣ ಮತ್ತು ಇಲ್ಲಿನ ಸಮಸ್ಯೆಗಳ ಬಗ್ಗೆ ಸ್ಪಷ್ಟವಾದ ಅರಿವಿದೆ. ಈ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವ ಕೆಲಸವನ್ನು ಸರ್ಕಾರ ಸಮರ್ಪಕವಾಗಿ ನಿರ್ವಹಿಸಿದೆ. ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ 492 ಭರವಸೆಗಳನ್ನು ನೀಡಿದ್ದು, ಅದರಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷದಲ್ಲಿ 242 ಭರವಸೆಗಳನ್ನು ಈಡೇರಿಸಲಾಗಿದೆ. 2013 ರಿಂದ 2018ರವರೆಗೆ ಹಾಗೂ 2023 ರಿಂದ ಇಲ್ಲಿಯವರೆಗಿನ ನಮ್ಮ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಎಲ್ಲ ಭರವಸೆಗಳನ್ನು ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. 2013-2018ರಲ್ಲಿ ನೀಡಲಾಗಿದ್ದ 162 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. 2023 ರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದ ತಕ್ಷ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಾಯಿತು. ಈ ಪ್ರಯತ್ನದ ಫಲವಾಗಿ ಜೂನ್ ತಿಂಗಳಲ್ಲಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದು, ಇದುವರೆಗೂ ಸುಮಾರು 600 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಬಸ್ ಸೇವೆ ಪಡೆದಿದ್ದಾರೆ ಎಂದರು.

ಇದನ್ನು ಓದಿ: ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದ ಬಳಿ 700 ಎಕರೆ ಜಾಗವಿದ್ದು, ಅಲ್ಲಿ ಪ್ರವಾಸೋದ್ಯಮದ ಪ್ರೋತ್ಸಾಹಕ್ಕೆ ಉದ್ಯಾನವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿಸಚಿವರಾದ ಕೃಷ್ಣ ಬೈರೇಗೌಡರವರು ಕೋರಿದ ಸಲ್ಲಿಸಿದ್ದು, ಈ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳುವ ಭರವಸೆಯನ್ನು ನೀಡಿ ಮುಖ್ಯಮಂತ್ರಿಗಳು ನೀಡಿದರು. ಕರ್ನಾಟಕದ ಇತಿಹಾಸದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರವೇ ಕೊಟ್ಟ ಮಾತಿನಂತೆ ನಡೆದಿದೆ ಎಂದರು.

ಗ್ಯಾರಂಟಿ ಯೋಜನೆಗಳನ್ನು ಜಾರಿಯಾಗಿಸಲು ಸಾಧ್ಯವಿಲ್ಲ ಎಂದು ವಿಪಕ್ಷಗಳು ದೂರಿದವು. ಆದರೆ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದ್ದು, ಇದುವರೆಗೆ 108135 ಕೋಟಿ ರೂಗಳನ್ನು ವೆಚ್ಚ ಮಾಡಿದೆ. ಲೋಕಸಭೆ ಚುನಾವಣೆಯ ನಂತರ ಗ್ಯಾರಂಟಿಗಳನ್ನು ನಿಲ್ಲಿಸಲಾಗುವುದು ಎಂದು ಅರೋಪಿಸಿದರು. ಟೀಕೆಗಳು ಸಾಯುತ್ತವೆ ಆದರೆ, ನಮ್ಮ ಜನಪರ ಕಾರ್ಯಗಳು ಸದಾ ಉಳಿಯುತ್ತವೆ ಎಂದರು.

ಸಮಸಮಾಜ ನಿರ್ಮಾಣ ಮಾಡಬೇಕು, ಜಾತಿ, ವರ್ಗ ತೊಲಗಿಸಬೇಕು, ಎಲ್ಲರಿಗೂ ಸಮಾನ ಅವಕಾಶಗಳು ಹಾಗೂ ಹಕ್ಕುಗಳನ್ನು ಕೊಡಬೇಕು ಎಂದು ಸಂವಿಧಾನ ಹೇಳುತ್ತದೆ. ಇದಾಗದೇ ಹೋದರೇ ದೇಶಕ್ಕೆ ಸ್ವಾತಂತ್ರ್ಯ ದೊರಕಿರುವುದು ಸಾರ್ಥಕವಾಗುವುದಿಲ್ಲ ಎಂದರು. ರಾಜಕೀಯ ಸ್ವಾತಂತ್ರ್ಯ ಬಂದರೆ ಮಾತ್ರ ಸಾಲದು. ಅದಕ್ಕಾಗಿಯೇ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ರೂಪಿಸಿದಾಗ ಎಲ್ಲಾ ಜಾತಿ, ಧರ್ಮಗಳ ಜನರಿಗೆ ತಲುಪುವಂತೆ ಮಾಡಿದ್ದೇವೆ. ಎಲ್ಲರೂ ಮುಖ್ಯವಾಹಿನಿಗೆ ಬರದೇ ಹೋದರೆ ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಸಾರ್ಥಕವಾಗುವುದಿಲ್ಲ. ಸಂವಿಧಾನ ಜಾರಿಯಾಗಿ 75 ವರ್ಷಗಳಾದರೂ ಸಮಾನತೆ ಬಂದಿಲ್ಲ. ಶ್ರೀಮಂತರು, ಶ್ರೀಮಂತರಾಗಿಯೇ ಇದ್ದಾರೆ, ಬಡವರು ಬಡವರಾಗಿಯೇ ಉಳಿದಿದ್ದಾರೆ. ಜಾತಿ ವ್ಯವಸ್ಥೆಯ ಕಾರಣದಿಂದ ಸಮಾನತೆ ಬಂದಿಲ್ಲ. ನಮ್ಮ ಸರ್ಕಾರ ಇದನ್ನು ಮನಗಂಡು ಭಾಗ್ಯ ಯೋಜನೆಗಳನ್ನು ಹಾಗೂ ಈಗ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.

ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಹಣ ಉಳಿತಾಯವಾಗುತ್ತಿದೆ. ಇದನ್ನು ವ್ಯರ್ಥ ಎಂದು ಕೆಲವರು ಟೀಕೆ ಮಾಡುತ್ತಿದ್ದು, ಇದಕ್ಕೆ ಜನರೇ ಉತ್ತರ ಕೊಡಬೇಕು ಎಂದರು. ಒಂದು ಲಕ್ಷ ಕೋಟಿಗೂ ಹೆಚ್ಚು ವೆಚ್ಚವನ್ನು ಗ್ಯಾರಂಟಿಗಳಿಗೆ ಕೊಡಬೇಕಾದರೆ ಸಮಾನತೆಯನ್ನು ತರಬೇಕೆಂಬ ಉದ್ದೇಶದಿಂದಲೇ ಎಂದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನೆನೆಸಿಕೊಂಡು ಸಮಾಜದಲ್ಲಿನ ಜಾತೀಯತೆ , ವರ್ಗ ವ್ಯವಸ್ಥೆಯನ್ನು ತೊಡೆದುಹಾಕೋಣ. ನಮ್ಮ ಸರ್ಕಾರ ದಲಿತರು, ರೈತರು, ಮಹಿಳೆಯರು, ಕಾರ್ಮಿಕರ ಪರವಾಗಿರುವ ಸರ್ಕಾರ ಎಂದರು. ಹಾಸನ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳಾಗಿವೆ. ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದನ್ನು ನಾವು ಜಾರಿ ಮಾಡಿದ್ದೇವೆ ಎಂದರು. ಇಂದು ಉದ್ಘಾಟನೆ ಮತ್ತು ಶಂಕುಸ್ಥಾಪನೆಗೊಂಡ ಯೋಜನೆಗಳು ಜನೋಪಕಾರಿಯಾಗಿವೆ. ಇನ್ನು ಮುಂದೆಯೂ ಹಾಸನ ಜಿಲ್ಲೆಗೆ ವಿಶೇಷ ಗಮನವನ್ನು ನೀಡಲಾಗುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

54 mins ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

1 hour ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

2 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

3 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

3 hours ago