ಹಾಸನ

ಸಿಎಂ ಸಿದ್ದರಾಮಯ್ಯ ವಿರುದ್ಧ ಸಕಲೇಶಪುರ ಜನತೆ ಆಕ್ರೋಶ: ಕಾರಣ ಇಷ್ಟೆ

ಸಕಲೇಶಪುರ: ಭಾರೀ ಮಳೆಯಿಂದ ಅನೇಕ ತೊಂದರೆಗಳನ್ನು ಎದುರಿಸುತ್ತಿರುವ ಹಾಸನ ಜಿಲ್ಲೆ ಸಕಲೇಶಪುರ ಜನತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರೀ ಮಳೆ ಸುರಿದ ಪರಿಣಾಮ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದ ಮನೆಯಲ್ಲೇ ಲಾಕ್‌ ಆಗಿರುವ ಕೆಲ ಪ್ರದೇಶಗಳ ಜನರು ಅಗತ್ಯ ವಸ್ತುಗಳ ಖರೀದಿಗೆ ತೀವ್ರ ಕಷ್ಟ ಅನುಭವಿಸುತ್ತಿದ್ದಾರೆ.

ಗುಡ್ಡ ಕುಸಿತ ವರದಿಯಾದ ಬಳಿಕ ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯ ಅವರು, ಸಕಲೇಶಪುರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ತೆರಳಿದ್ದರು. ಆದರೆ ಸಮಸ್ಯೆ ಪರಿಹಾರಕ್ಕೆ ಸಿಎಂ ಸಿದ್ದರಾಮಯ್ಯ ಯಾವುದೇ ಭರವಸೆ ನೀಡದೇ ಹೋಗಿದ್ದರು.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರ ನಡೆ ಜನರ ಅಸಮಾಧಾನಕ್ಕೆ ಕಾರಣವಾಗಿದ್ದು, ಸಿಎಂ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸ್ಥಳೀಯರು ನಿರೀಕ್ಷೆ ಮಾಡಿದ್ದ ಸ್ಪಂದನೆ ಸಿಎಂ ಸಿದ್ದರಾಮಯ್ಯರಿಂದ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ಜನತೆ ಕಿಡಿಕಾರಿದ್ದು, ಆದಷ್ಟು ಬೇಗ ಮೂಲಭೂತ ಸೌಕರ್ಯದ ಜೊತೆ ಜೊತೆಗೆ ಗುಡ್ಡ ಕುಸಿತ ಸಂಭವಿಸದ ಹಾಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

2 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

2 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

2 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

2 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

3 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

3 hours ago