ಹಾಸನ : ಪ್ರಸಿದ್ದ ಹಾಸನಾಂಬ ಜಾತ್ರಾ ಮಹೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದರು.
ಮೊದಲ ಬಾರಿಗೆ ಹಾಸನಾಂಬೆಯ ದರ್ಶನ ಪಡೆದ ಸಿಎಂಗೆ ಸಂಪುಟ ಸಹೋದ್ಯೋಗಳು ಸಾಥ್ ನೀಡಿದರು.
ಬಳಿಕ ಮಾತನಾಡಿದ ಸಿಎಂ, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಸನಾಂಬೆಯ ಜಾತ್ರೆ ನಡೆಯುತ್ತಿದೆ ನೀವು ಬರಬೇಕು ಎಂದಿದ್ದರು. ಹಾಗಾಗಿ ನಾನು ಬಂದು ದೇವಿಯ ಆಶಿರ್ವಾದ ಪಡೆದೆ. ಹಾಸನಾಂಬೆ ಬಹಳ ಇತಿಹಾಸವುಳ್ಳ ದೇವಿ. ಈ ಬಾರಿ ರಾಜಣ್ಣ ನೇತೃತ್ವದಲ್ಲಿ ಜಾತ್ರೆ ಬಹಳ ಅಚ್ಚು ಕಟ್ಟಾಗಿ ನಡೆಯುತ್ತಿದೆ ಎಂದರು.
ಕೇಂದ್ರದಿಂದ ಬರ ಪರಿಹಾರ ಬರುವ ಬಗ್ಗೆ ಮಾತನಾಡಿದ ಸಿಎಂ, ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಬಂದು ಹೋಗಿ 20 ದಿನ ಕಳೆಯಿತು. ಅವರು ವರದಿ ಕೊಟ್ಟರೂ ಕೇಂದ್ರ ಸರ್ಕಾರ ಗೈಡ್‌ಲೈನ್ ಪ್ರಕಾರ ಹಣ ಬಿಡುಗಡೆ ಮಾಡಿಲ್ಲ. ನಾವು ಎನ್‌ಡಿಆರ್‌ಎಫ್ ನಿಯಮದಡಿ 17,900 ಕೋಟಿ ರೂಪಾಯಿ ಹಣ ಕೇಳಿದ್ದೇವೆ. ನಮ್ಮ ರಾಜ್ಯದಿಂದ ಲಕ್ಷ ಲಕ್ಷ ತೆರಿಗೆ ಕೇಂದ್ರಕ್ಕೆ ಸಂದಾಯವಾಗ್ತಿದೆ. ಹಾಗಾಗಿ ನಮ್ಮ ಹಣ ನಾವು ಕೇಳಿದ್ದೇವೆ ಎಂದರು.
ನಾವು ಕೇಂದ್ರದೊಂದಿಗೆ ಜಗಳ ಮಾಡ್ತಿಲ್ಲ. ನಮ್ಮ ಸಚಿವರು ಹೋಗಿ ಕೇಂದ್ರ ಸಚಿವರನ್ನು ಭೇಟಿಯಾಗೋಣ ಎಂದರೆ ಅವರ ಸಮಯ ಕೊಡುತ್ತಿಲ್ಲ. ವಿಪಕ್ಷದವರು ನಾವು ಜಗಳ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ನಾವೇನು ಮಾಡ್ಲಿ. ಹಾಸನಾಂಬೆ ಎಲ್ಲರಿಗೂ ಒಳ್ಳೇದು ಮಾಡಲಿ ಎಂದು ಹೇಳಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…