ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಬೇಲೂರು ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ರೈತರೊಬ್ಬರಿಗೆ ಸೇರಿದ 20 ಮೂಟೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ರೈತ ಮಧು ಎಂಬುವವರು ಕಾಫಿ ಹಣ್ಣು ಕೊಯ್ಲು ಮಾಡಿ ಚೀಲಗಳಲ್ಲಿ ತುಂಬಿ ಮನೆಯ ಸಮೀಪದ ತೋಟದಲ್ಲಿಟ್ಟಿದ್ದರು. ಇದರಲ್ಲಿ 20 ಮೂಟೆಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಸುಮಾರು 1.5 ಲಕ್ಷ ರೂ ಮೌಲ್ಯದ ಕಾಫಿ ಹಣ್ಣುಗಳ ಕಳುವಾಗಿದೆ ಎಂದು ಅಂದಾಜಿಸಲಾಗಿದ್ದು, ರೈತ ಮಧು ತೀವ್ರ ಕಂಗಾಲಾಗಿದ್ದಾರೆ.





