ಬೆಂಗಳೂರು: ಜೆಡಿಎಸ್ ಪ್ರಾಬಲ್ಯವಿರುವ ಹಾಸನ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿದ್ದಾರೆ.
ಮುಂದಿನ ತಿಂಗಳ ಡಿಸೆಂಬರ್.5ರಂದು ಮೆಗಾ ರ್ಯಾಲಿ ನಡೆಸಲು ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ಹಾಸನದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಿ.ಪರಮೇಶ್ವರ್ ಅವರು, ಬಲವಾದ ಸಂದೇಶ ರವಾನಿಸಲು ಹಾಸನದಲ್ಲಿ ರಾಜಕೀಯ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ತುಮಕೂರಿನಲ್ಲಿ ಡಿಸೆಂಬರ್.2ರಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ರ್ಯಾಲಿ ನಡೆಯಲಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನತೆಗೆ ಮತ್ತಷ್ಟು ಮನವರಿಕೆ ಮಾಡಿಕೊಡಲಾಗುತ್ತದೆ.
ಈ ಸಮಾವೇಶದ ಮೂಲಕ ವಿರೋಧ ಪಕ್ಷಗಳಿಗೆ ರಾಜ್ಯ ಸಚಿವರು ಟಕ್ಕರ್ ಕೊಡಲಿದ್ದು, ಅಂದಿನ ಸಮಾವೇಶಕ್ಕೆ ಐದು ಜಿಲ್ಲೆಯ ಜನರು ಸೇರುವ ನಿರೀಕ್ಷೆಯಿದೆ ಎನ್ನಲಾಗಿದೆ.