Categories: ಹಾಸನ

ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜೆಡಿಎಸ್‌ ಪ್ರಾಬಲ್ಯವಿರುವ ಹಾಸನ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿದ್ದಾರೆ.

ಮುಂದಿನ ತಿಂಗಳ ಡಿಸೆಂಬರ್.‌5ರಂದು ಮೆಗಾ ರ್ಯಾಲಿ ನಡೆಸಲು ಕಾಂಗ್ರೆಸ್‌ ಎಲ್ಲಾ ತಯಾರಿ ಮಾಡಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ.

ಸಹಕಾರ ಸಚಿವ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ಹಾಸನದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಿ.ಪರಮೇಶ್ವರ್‌ ಅವರು, ಬಲವಾದ ಸಂದೇಶ ರವಾನಿಸಲು ಹಾಸನದಲ್ಲಿ ರಾಜಕೀಯ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಈ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್‌ ಅವರ ನೇತೃತ್ವದಲ್ಲಿ ತುಮಕೂರಿನಲ್ಲಿ ಡಿಸೆಂಬರ್.‌2ರಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ರ್ಯಾಲಿ ನಡೆಯಲಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನತೆಗೆ ಮತ್ತಷ್ಟು ಮನವರಿಕೆ ಮಾಡಿಕೊಡಲಾಗುತ್ತದೆ.

ಈ ಸಮಾವೇಶದ ಮೂಲಕ ವಿರೋಧ ಪಕ್ಷಗಳಿಗೆ ರಾಜ್ಯ ಸಚಿವರು ಟಕ್ಕರ್‌ ಕೊಡಲಿದ್ದು, ಅಂದಿನ ಸಮಾವೇಶಕ್ಕೆ ಐದು ಜಿಲ್ಲೆಯ ಜನರು ಸೇರುವ ನಿರೀಕ್ಷೆಯಿದೆ ಎನ್ನಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

30 mins ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

32 mins ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

34 mins ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

36 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

47 mins ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

1 hour ago