ಹಾಸನ : ಕಾಡಾನೆ ಕಾರ್ಯಾಚರಣೆ ವೇಳೆ ವೀರ ಮರಣ ಹೊಂದಿದ್ದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದ್ದು, ಲಕ್ಷಾಂತರ ಅಭಿಮಾನಿಗಳ ಕನಸು ನನಸಾಗುತ್ತಿದೆ.
೨೦೨೩ರ ಡಿಸೆಂಬರ್ ೪ ರಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕನ್ನಡದ ಕಂದ ಅರ್ಜುನ ಸಾವನ್ನಪ್ಪಿದ್ದ. ಸಕಲೇಶಪುರ ತಾಲೂಕಿನ ಯಸಳೂರು ಅರಣ್ಯದ ದಬ್ಬಳ್ಳಿಕಟ್ಟೆಯ ನೆಡುತೋಪಿನ ಬಳಿ ಸಮಾಧಿ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಇಡೀ ಕರುನಾಡೇ ಅರ್ಜುನನ ಸಾವಿಗೆ ಕಂಬನಿ ಮಿಡಿದಿತ್ತು.
ಇನ್ನು ಅರ್ಜುನ ಸಮಾಧಿ ಬಳಿ ಹೋಗಲು ಸಮರ್ಪಕವಾದ ರಸ್ತೆ ಇಲ್ಲ. ಮಳೆ ಬಂದರೆ ಸಾಕು ಅರ್ಜುನನ ಸಮಾಧಿ ಕೆಸರು ಗದ್ದೆಯಂತಾಗುತ್ತಿದೆ. ಕೂಡಲೇ ಇಲ್ಲಿ ಮೂಲ ಸೌಕರ್ಯಗಳನ್ನ ಒದಗಿಸಬೇಕು, ಅರ್ಜುನನ ಸಮಾಧಿ ಬಳಿ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಅರ್ಜುನ ಆನೆ ಅಭಿಮಾನಿಗಳು ಒತ್ತಾಯ ಮಾಡಿದ್ದರು.
ಅದರಂತೆ ಇದೀಗ ಸರ್ಕಾರ ಕೂಡ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಇದಕ್ಕೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಈ ಮೂಲಕವಾಗಿ ಲಕ್ಷಾಂತರ ಅರ್ಜುನನ ಅಭಿಮಾನಿಗಳ ಕನಸು ಈಡೇರುತ್ತಿದೆ.
ಅರ್ಜುನ ಆನೆಯನ್ನ ೧೯೬೮ ರಲ್ಲಿ ಕಾಕನಕೋಟೆಯ ಕಾಡುಗಳಿಂದ ಖೆಡ್ಡಾ ಕಾರ್ಯಾಚರಣೆಯಲ್ಲಿ ಆತನನ್ನ ಸೆರೆಯಿಡಿಯಲಾಗಿತ್ತು. ನಂತರ ಆತನನ್ನ ಪಳಗಿಸಿದ ಬಳಿಕ ೧೯೯೦ರ ದಶಕದಲ್ಲಿ ಮೈಸೂರಿನ ದಸರಾ ಉತ್ಸವದ ಸಂದರ್ಭದಲ್ಲಿ ಮೆರವಣಿಗೆಯನ್ನ ಒಳಗೊಂಡ ಶಿಬಿರಗಳಲ್ಲಿ ಬಳಸಿಕೊಳ್ಳಲಾಯಿತು. ನಂತರ ಅಂಬಾರಿ ಹೊರುವ ಜವಾಬ್ದಾರಿಯನ್ನ ತೆಗೆದುಕೊಂಡು ಅಂಬಾರಿಯನ್ನ ಹೊತ್ತು ಗಜಗಾಂಭೀರ್ಯದ ಹೆಜ್ಜೆ ಹಾಕಿ ಯಶಸ್ವಿ ದಸರಾ ನಡೆಸಿಕೊಟ್ಟಿದ್ದಾನೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…