Mysore
24
mist

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಒಂದು ವರ್ಷದೊಳಗೆ ಎಲ್ಲಾ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದರು.

ಶಕ್ತಿ ಯೋಜನೆ ವೇಸ್ಟ್‌ ಅಂತಾರೆ. ನಾವು ದಡ್ಡರಲ್ಲ ಒಂದು ಲಕ್ಷಕ್ಕೂ ಹೆಚ್ಚು ಕೋಟಿ ರೂ ಖರ್ಚು ಮಾಡುವುದು ಸಮಾನತೆ ತರಲೆಂದು. ಲೋಕಸಭಾ ಚುನಾವಣೆ ಆದ ಮೇಲೆ ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಹೇಳಿದ್ದರು. ಇದಕ್ಕೆಲ್ಲಾ ನೀವೇ ಉತ್ತರ ಕೊಡಬೇಕು ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಶ್ರವಣಬೆಳಗೊಳದಲ್ಲಿ ಉದ್ಯಾನವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಾನು ಮಾತು ಕೊಡಲ್ಲ. ಕೊಟ್ಟ ಮೇಲೆ ಮಾಡೇ ಮಾಡ್ತೀನಿ ಎಂದರು.

Tags:
error: Content is protected !!