ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಒಂದು ವರ್ಷದೊಳಗೆ ಎಲ್ಲಾ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದರು.
ಶಕ್ತಿ ಯೋಜನೆ ವೇಸ್ಟ್ ಅಂತಾರೆ. ನಾವು ದಡ್ಡರಲ್ಲ ಒಂದು ಲಕ್ಷಕ್ಕೂ ಹೆಚ್ಚು ಕೋಟಿ ರೂ ಖರ್ಚು ಮಾಡುವುದು ಸಮಾನತೆ ತರಲೆಂದು. ಲೋಕಸಭಾ ಚುನಾವಣೆ ಆದ ಮೇಲೆ ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಹೇಳಿದ್ದರು. ಇದಕ್ಕೆಲ್ಲಾ ನೀವೇ ಉತ್ತರ ಕೊಡಬೇಕು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಶ್ರವಣಬೆಳಗೊಳದಲ್ಲಿ ಉದ್ಯಾನವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಾನು ಮಾತು ಕೊಡಲ್ಲ. ಕೊಟ್ಟ ಮೇಲೆ ಮಾಡೇ ಮಾಡ್ತೀನಿ ಎಂದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…