ಹಾಸನ

ಹಾಸನದಲ್ಲಿ ಆನಾರೋಗ್ಯದಿಂದ ಸಿಆರ್‌ಪಿಎಫ್‌ ಯೋಧ ಸಾವು

ಹಾಸನ: ಸಿಆರ್‌ಪಿಎಫ್‌ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

ರವಿಶಂಕರ್‌ ಎಂಬುವವರೇ ಮೃತ ಯೋಧರಾಗಿದ್ದಾರೆ. ಯೋಧನ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಆರೋಪಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದ ಯೋಧ ರವಿಶಂಕರ್‌ ಅವರ ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿಯಿತ್ತು.

ಹೊಳೆನರಸೀಪುರಕ್ಕೆ ಬಂದಿದ್ದ ಯೋಧ ರವಿಶಂಕರ್‌ ಅವರಿಗೆ ಜ್ವರ, ಸುಸ್ತು, ಉಸಿರಾಟದ ತೊಂದರೆ ಸಮಸ್ಯೆ ಕಾಣಿಸಿಕೊಂಡಿದೆ.

ಕೂಡಲೇ ಅವರನ್ನು ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಸರಿಯಾಗಿ ತಪಾಸಣೆ ಮಾಡದೇ ಕೇವಲ ಮಾತ್ರೆ ನೀಡಿ ಕಳುಹಿಸಿದ್ದರು ಎನ್ನಲಾಗಿದೆ.

ಮನೆಗೆ ತೆರಳುತ್ತಿದ್ದಂತೆ ಯೋಧ ರವಿಶಂಕರ್‌ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ರವಿಶಂಕರ್‌ ಸಾವಿಗೆ ವೈದ್ಯರೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ತಾಲ್ಲೂಕು ಆಸ್ಪತ್ರೆಯ ಶವಾಗಾರದಲ್ಲಿ ಮೃತ ಯೋಧನ ಶವವನ್ನು ಇರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

38 seconds ago

ನಾಳೆ ಅರಮನೆಗೆ ಅಭಿಮನ್ಯು ಪ್ರವೇಶ

ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…

6 mins ago

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

14 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

15 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

15 hours ago