Mysore
26
clear sky

Social Media

ಬುಧವಾರ, 15 ಏಪ್ರಿಲ 2026
Light
Dark

ಹಾಸನದಲ್ಲಿ ತೀವ್ರ ಜ್ವರದಿಂದ ಬಳಲಿ ೮ ವರ್ಷದ ಬಾಲಕಿ ಸಾವು

ಹಾಸನ : ಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗುತ್ತಿದ್ದು, ಈ ಡೆಂಗ್ಯೂ ಗೆ ಮಕ್ಕಳೇ ಹೆಚ್ಚಾಗಿ ತುತ್ತಾಗುತ್ತಿದ್ದಾರೆ. ಡೆಂಗ್ಯೂ ಗೆ ಸಾವನ್ನಪ್ಪಿದವರ ಸಂಖ್ಯೆ ಕೂಡ ನಾಲ್ಕಕ್ಕೆ ಏರಿಕೆಯಾಗಿದೆ. ಎಂಟು ವರ್ಷದ ಬಾಲಕಿಯೊಬ್ಬಳು ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ್ದಾಳೆ.

ಹೊಳೆ ನರಸೀಪುರ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ರಮೇಶ್-‌ ಅಶ್ವಿನಿ ದಂಪತಿಯ ಪುತ್ರಿ ಸಮೃದ್ಧಿ ಮೃತ ಬಾಲಕಿಯಾಗಿದ್ದಾಳೆ. ಕಳೆದ ಮೂರ್ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಹಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ನೀಡಿದ್ದರು ಸಹ ಆರೋಗ್ಯ ಸುಧಾರಿಸಿದ ಕಾರಣ ಪೋಷಕರು ಆಕೆಯನ್ನ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಲ್ಲಿಯೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಮೃದ್ಧಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ತೀವ್ರ ಜ್ವರವಿದ್ದ ಕಾರಣ ಡೆಂಗ್ಯೂಯಿಂದ ಸಾವನ್ನಪ್ಪಿದ್ದಾಳೆ ಎಂದು ಅಂದಾಜಿಸಲಾಗಿದೆ. ಆದರೆ ವೈದ್ಯರು ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಬೇಕಾಗಿದೆ.

ಇನ್ನು ಹಿಮ್ಸ್‌ ನಲ್ಲಿ ೩೭ ಮಕ್ಕಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ೮ ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.

Tags:
error: Content is protected !!