ಹಾಸನ : ಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗುತ್ತಿದ್ದು, ಈ ಡೆಂಗ್ಯೂ ಗೆ ಮಕ್ಕಳೇ ಹೆಚ್ಚಾಗಿ ತುತ್ತಾಗುತ್ತಿದ್ದಾರೆ. ಡೆಂಗ್ಯೂ ಗೆ ಸಾವನ್ನಪ್ಪಿದವರ ಸಂಖ್ಯೆ ಕೂಡ ನಾಲ್ಕಕ್ಕೆ ಏರಿಕೆಯಾಗಿದೆ. ಎಂಟು ವರ್ಷದ ಬಾಲಕಿಯೊಬ್ಬಳು ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ್ದಾಳೆ.
ಹೊಳೆ ನರಸೀಪುರ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ರಮೇಶ್- ಅಶ್ವಿನಿ ದಂಪತಿಯ ಪುತ್ರಿ ಸಮೃದ್ಧಿ ಮೃತ ಬಾಲಕಿಯಾಗಿದ್ದಾಳೆ. ಕಳೆದ ಮೂರ್ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಹಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ನೀಡಿದ್ದರು ಸಹ ಆರೋಗ್ಯ ಸುಧಾರಿಸಿದ ಕಾರಣ ಪೋಷಕರು ಆಕೆಯನ್ನ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಲ್ಲಿಯೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಮೃದ್ಧಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ತೀವ್ರ ಜ್ವರವಿದ್ದ ಕಾರಣ ಡೆಂಗ್ಯೂಯಿಂದ ಸಾವನ್ನಪ್ಪಿದ್ದಾಳೆ ಎಂದು ಅಂದಾಜಿಸಲಾಗಿದೆ. ಆದರೆ ವೈದ್ಯರು ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಬೇಕಾಗಿದೆ.
ಇನ್ನು ಹಿಮ್ಸ್ ನಲ್ಲಿ ೩೭ ಮಕ್ಕಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ೮ ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…