ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, 12 ದಿನಗಳಲ್ಲಿ ಲಕ್ಷಾಂತರ ಮಂದಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ನಾಳೆ ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದ್ದು, ದೇವಿಯ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬರುತ್ತಿದ್ದಾರೆ.
ಕಳೆದ 12 ದಿನಗಳಲ್ಲಿ ಬರೋಬ್ಬರಿ 23 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಿಯನ್ನು ಕಣ್ತುಂಬಿಕೊಳ್ಳಲು ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.





