ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ಕರುಣಿಸುವ ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ನವೆಂಬರ್ 11ರ ಮಧ್ಯಾಹ್ನ ದೇವಾಲಯದ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಗಿದ್ದು, ಈ ವರ್ಷದ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದೆ.
ಮಧ್ಯಾಹ್ನ 12ರಿಂದ ಒಂದೂವರೆ ಗಂಟೆಯವರೆಗೆ ರಾಹುಕಾಲ ಇದ್ದ ಹಿನ್ನೆಲೆಯಲ್ಲಿ, ಅದು ಮುಗಿದ ಬಳಿಕ ಬಾಗಿಲು ಮುಚ್ಚುವ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಶಾಸಕ ಹೆಚ್.ಪಿ. ಸ್ವರೂಪ್‌ಪ್ರಕಾಶ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ದೇವಿಯ ದರ್ಶನ ಪಡೆದರು.
ಬಳಿಕ ಅರ್ಚಕರು ದೇವಿಗೆ ಮಾಡಿದ್ದ ಅಲಂಕಾರವನ್ನು ತೆರವುಗೊಳಿಸಿ, ಒಡವೆಗಳನ್ನು ಹೊರತಂದರು. ಅಲಂಕಾರ ವಿಸರ್ಜನೆ ಪೂಜೆ ನೆರವೇರಿಸಿದ ನಂತರ, ಗರ್ಭಗುಡಿಯ ದೀಪಕ್ಕೆ ಎಣ್ಣೆ ಹಾಕಲಾಯಿತು.
ಅಂತಿಮವಾಗಿ ಗರ್ಭಗುಡಿ ಬಾಗಿಲಿಗೆ ಶಾಸ್ತ್ರೋಕ್ತವಾಗಿ ಬೀಗ ಹಾಕಿ, ಪ್ರಧಾನ ಅರ್ಚಕ ನಾಗರಾಜ್ ಮುದ್ರೆ ಒತ್ತಿದರು. ಈ ಮೂಲಕ ಈ ವರ್ಷದ ಹಾಸನಾಂಬೆ ದರ್ಶನಕ್ಕೆ ತೆರೆ ಬಿದ್ದಿದೆ.
ವರದಿಯ ಪ್ರಕಾರ, ಮುಂದಿನ ವರ್ಷ ಅಕ್ಟೋಬರ್ 21ರಿಂದ 31ರವರೆಗೆ ಹಾಸನಾಂಬ ದೇವಿಯ ದರ್ಶನೋತ್ಸವ ನಡೆಯಲಿದೆ.
ಮೈಸೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮೊದಲು ಪೆಟ್ರೋಲ್‌ಗೆ ಎಥನಾಲ್ ಮಿಶ್ರಣ…
ಬೆಂಗಳೂರು: ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಆರಂಭಿಸಲಾಗಿದೆ. ಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳು ಚಿಕಿತ್ಸೆಗೆ ವ್ಯವಸ್ಥೆ…
ಮೈಸೂರು: ಕಾಂಗ್ರೆಸ್ ಕಾರ್ಯಕರ್ತರ ಕುರಿತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಈ ಬಾರಿಯ ದೀಪಾವಳಿ ಜಾತ್ರಾ ಮಹೋತ್ಸವ ಮಲೆ ಮಹದೇಶ್ವರ ಬೆಟ್ಟದ…
ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ರೂಪುಗೊಳ್ಳುವ ಸಾಧ್ಯತೆ ಇದೆ. ನವೆಂಬರ್ 13ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ…
ಗುವಾಹಟಿ: ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್ ರೈಲೊಂದು ಹಳಿತಪ್ಪಿದ ಪರಿಣಾಮ ಕೆಲ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಅಸ್ಸಾಂನ ಡಿಗಾರು ರೈಲು ನಿಲ್ದಾಣದ ಬಳಿ…