Mysore
28
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೈತ ರಾಜಶೆಟ್ಟಿ ಎಂಬುವವರು ಕಾಡಾನೆ ದಾಳಿಗೆ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.

ಬೆಳಿಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಸೊಂಡಿಲಿನಿಂದ ಎತ್ತಿ ಬಿಸಾಕಿ ತುಳಿದು ಸಾಯಿಸಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅರೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Tags:
error: Content is protected !!