ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ.
ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆಯನ್ನು ತುಳಿದು ಕೊಂದು ಹಾಕಿದೆ.
40 ವರ್ಷದ ಶೋಭಾ ಎಂಬುವವರೇ ಆನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




