ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ.
ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆಯನ್ನು ತುಳಿದು ಕೊಂದು ಹಾಕಿದೆ.
40 ವರ್ಷದ ಶೋಭಾ ಎಂಬುವವರೇ ಆನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…