ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ.
ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು ಅಟ್ಟಾಡಿಸಿಕೊಂಡು ಬಂದಿದ್ದು, ಆನೆಯಿಂದ ತಪ್ಪಿಸಿಕೊಂಡು ಓಡಿ ಮನೆಯ ಬಳಿಯಿದ್ದ ಮೆಟ್ಟಿಲನ್ನೇರಿ ಮನೆಯ ಮೇಲೆ ಹೋಗಿ ಕಾರ್ಮಿಕ ಜೀವ ಉಳಿಸಿಕೊಂಡಿದ್ದಾನೆ.
ಆದರೆ, ಕಾರ್ಮಿಕ ಪುನಃ ಮೆಟ್ಟಿಲಿನಿಂದ ಇಳಿದು ಬರಬಹುದು ಎಂದು ಮನೆಯ ಮುಂದಿನ ಕಾಫಿ ತೋಟದಲ್ಲಿ ಒಂಟಿಸಲಗ ಸುಮಾರು ಹೊತ್ತು ಅಡಗಿ ಕುಳಿತು ಬೇಟೆಗಾಗಿ ಹುಲಿಯಂತೆ ಹೊಂಚು ಹಾಕಿತ್ತು. ಆನೆಯನ್ನು ಮನೆ ಮೇಲಿನಿಂದ ನೋಡುತ್ತಿದ್ದ ಕಾರ್ಮಿಕ ಆನೆ ಸಂಪೂರ್ಣವಾಗಿ ಹೋಗುವುದನ್ನು ಖಚಿತಪಡಿಸಿಕೊಂಡ ಬಳಿಕವೇ ಕೆಳಗೆ ಇಳಿದಿದ್ದಾನೆ.
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಡೆಗರ್ಜೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಭಾಗದಲ್ಲಿ ಕಾಡಾನೆಗಳು ಹಾಗೂ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಆನೆಗಳ ದಾಳಿಗೆ ಸಿಲುಕಿ ಸಾವನ್ನಪ್ಪುವವರ ಪ್ರಕರಣ ಹೆಚ್ಚಾಗುತ್ತಲೇ ಇದೆ. ಇಂದಿನ ಘಟನೆಯಿಂದ ಜನತೆ ಭಾರೀ ಭಯಭೀತರಾಗಿದ್ದು, ಕಾಡಾನೆಗಳ ದಾಳಿಯನ್ನು ತಪ್ಪಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಮೈಸೂರು: ಹೊಸ ವರ್ಷಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಮಾಗಿ ಉತ್ಸವಕ್ಕೆ ಚಾಲನೆ…
ಕಲಬುರ್ಗಿ: ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಸದನದಲ್ಲಿ ದ್ವೇಷದ ಮಾತನ್ನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹುಚ್ಚುನಾಯಿ…
ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟವನ್ನು ನೆರೆಯ ಆಂಧ್ರಪ್ರದೇಶ ರಾಜ್ಯದಲ್ಲಿರುವ ತಿರುಪತಿ ದೇವಾಲಯದ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಅಧಿಕಾರಿಗಳು…
ಮಂಡ್ಯ: ನೈಸರ್ಗಿಕ ವಿಕೋಪಗಳಿಗೆ ಸಹಜವಾಗಿ ಆತಂಕ ಎಂಬ ಪದ ಬಳಕೆ ಸಾಮಾನ್ಯವಾಗಿದೆ. ಆತಂಕ ನಿವಾರಣೆಗೆ ಅದನ್ನು ಎದುರಿಸುವ ಮನಸ್ಥಿತಿಯನ್ನು ಅಳವಡಿಸಿ…
ನವದೆಹಲಿ/ನ್ಯೂಯಾರ್ಕ್: ವಿಶ್ವಸಂಸ್ಥೆಯ ಇಂಟರ್ನಲ್ ಜಸ್ಟೀಸ್ ಕೌನ್ಸಿಲ್ನ (ಆಂತರಿಕ ನ್ಯಾಯ ಮಂಡಳಿ) ಮುಖ್ಯಸ್ಥರಾಗಿ ಭಾರತದ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಮದನ್…
ಮಂಡ್ಯ: ಜಿಲ್ಲೆಯ ಚರಿತ್ರೆ, ಸಾಮಾಜಿಕ ವಿಚಾರ ನೋಡಿದರೆ ಹಲವಾರು ಪ್ರಥಮಗಳನ್ನು ಮಂಡ್ಯ ದಾಖಲಿಸಿದೆ. ಮೈಸೂರಿನಿಂದ ಪ್ರತ್ಯೇಕವಾದ ಮೇಲೂ ಹಲವು ಅದ್ಭುತಗಳನ್ನು…