Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸಕಲೇಶಪುರದಲ್ಲಿ ಮುಂದುವರಿದ ಕಾಡಾನೆ ಹಾವಳಿ: ರೈತರ ಆಕ್ರೋಶ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆನೆಗಳ ಹಿಂಡು ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟು ಅಪಾರ ಪ್ರಮಾಣದ ಬೆಳೆಗಳನ್ನು ತುಳಿದು ನಾಶಪಡಿಸಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತರು ಕಿಡಿಕಾರಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇನ್ನು ಬೇಲೂರು-ಸೋಮವಾರಪೇಟೆ ರಾಜ್ಯ ಹೆದ್ದಾರಿಯು ಗುಂಡಿಬಿದ್ದಿದ್ದು, ಸಂಚಾರಕ್ಕೆ ಭಾರೀ ಸಮಸ್ಯೆ ಉಂಟಾಗಿದೆ.

ಒಂದು ವೇಳೆ ವಾಹನ ಸಂಚರಿಸುವಾಗ ಅಕಸ್ಮಾತ್‌ ಆನೆಗಳು ಬಂದರೆ, ವೇಗವಾಗಿ ಚಾಲನೆ ಮಾಡಲು ಸಹ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ವಾಹನ ಸವಾರರು ರಸ್ತೆಯನ್ನು ಆದಷ್ಟು ಬೇಗ ಸರಿಪಡಿಸುವಂತೆ ಆಗ್ರಹಿಸಿದ್ದಾರೆ. ಸ್ಥಳೀಯರಂತೂ ಈ ರಸ್ತೆಯಲ್ಲಿ ಓಡಾಡುವುದಕ್ಕೂ ತೀವ್ರ ಕಷ್ಟ ಪಡುತ್ತಿದ್ದು, ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕುತ್ತಲೇ ಇದ್ದಾರೆ.

ಮುಂದಿನ ದಿನಗಳಲ್ಲಿ ಹೆಚ್ಚಿನ ಅನಾಹುತ ಆಗುವುದಕ್ಕೂ ಮುಂಚೆ ಸರ್ಕಾರ ಹಾಗೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ರಸ್ತೆಯನ್ನು ಸರಿಪಡಿಸುವುದರ ಜೊತೆಗೆ ಆನೆಗಳ ಹಾವಳಿಯನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Tags: