ಹಾಸನ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಆನೆಯೊಂದು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಆಕಾಶವಾಣಿ ಟವರ್ ಬಳಿ ನಡೆದಿದೆ.
ಮೃತ ಕಾಡಾನೆಗೆ 25 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ.
ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆ ಕಾಲು ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಗುಲಿದೆ. ಪರಿಣಾಮ ಆನೆ ಸಾವನ್ನಪ್ಪಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ಆನೆ ಪ್ರತಿ ದಿನ ರೈತರ ಜಮೀನಿಗೆ ಲಗ್ಗೆಯಿಟ್ಟು, ಫಸಲಿಗೆ ಬಂದಿದ್ದ ಭತ್ತದ ಬೆಳೆಯನ್ನು ಸಂಪೂರ್ಣ ನಾಶಪಡಿಸಿದೆ.
ಈ ಹಿನ್ನೆಲೆಯಲ್ಲಿ ಬೆಳೆ ನಾಶಕ್ಕೆ ರೈತರು ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.