Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಇಂದಿನಿಂದ ಪ್ರಸಿದ್ಧ ಹಾಸನಾಂಬ ದರ್ಶನೋತ್ಸವ ಆರಂಭ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದೆ.

ಇಂದು ಮಧ್ಯಾಹ್ನ ದೇಗುಲದ ಬಾಗಿಲನ್ನು ತೆರೆಯಲಾಗುವುದು ಎಂದು ದೇಗುಲದ ಅರ್ಚಕರು ಮಾಹಿತಿ ನೀಡಿದ್ದಾರೆ.

ನವೆಂಬರ್.‌3ರಂದು ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದ್ದು, ಹಾಸನಾಂಬ ಉತ್ಸವಕ್ಕೆ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಗರ್ಭಗುಡಿ ಬಾಗಿಲು ತೆರೆಯಲಿದೆ.

ಇನ್ನು ಕಳೆದ ಬಾರಿ 14 ಲಕ್ಷ ಮಂದಿ ಸಾರ್ವಜನಿಕರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಮಂದಿ ಬರುವ ನಿರೀಕ್ಷೆಯಲ್ಲಿದ್ದು, ಇದಕ್ಕಾಗಿ ತಯಾರಿ ಮಾಡಿಕೊಳ್ಳಲಾಗಿದೆ.

ವರ್ಷದಿಂದ ವರ್ಷಕ್ಕೆ ಹಲವು ವಿಶೇಷತೆಗಳನ್ನು ಒಳಗೊಂಡು ನಡೆಯುತ್ತಿರುವ ಹಾಸನಾಂಬೆ ದೇವಿ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಈ ಬಾರಿ ನಗರದಲ್ಲಿ ಮೈಸೂರು ದಸರಾ ಮಾದರಿಯ ಚಿತ್ತಾಕರ್ಷಕ ಲೈಟಿಂಗ್ಸ್‌ ಅಳವಡಿಕೆ ಮಾಡಲಾಗಿದೆ.

ಈ ವರ್ಷ ಕೇವಲ 9 ದಿನಗಳು ಮಾತ್ರ ದೇವಿಯ ದರ್ಶನಕ್ಕೆ ಅವಕಾಶ ಸಿಗಲಿದದ್ದು, ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

Tags: