ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದೆ.
ಇಂದು ಮಧ್ಯಾಹ್ನ ದೇಗುಲದ ಬಾಗಿಲನ್ನು ತೆರೆಯಲಾಗುವುದು ಎಂದು ದೇಗುಲದ ಅರ್ಚಕರು ಮಾಹಿತಿ ನೀಡಿದ್ದಾರೆ.
ನವೆಂಬರ್.3ರಂದು ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದ್ದು, ಹಾಸನಾಂಬ ಉತ್ಸವಕ್ಕೆ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಗರ್ಭಗುಡಿ ಬಾಗಿಲು ತೆರೆಯಲಿದೆ.
ಇನ್ನು ಕಳೆದ ಬಾರಿ 14 ಲಕ್ಷ ಮಂದಿ ಸಾರ್ವಜನಿಕರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಮಂದಿ ಬರುವ ನಿರೀಕ್ಷೆಯಲ್ಲಿದ್ದು, ಇದಕ್ಕಾಗಿ ತಯಾರಿ ಮಾಡಿಕೊಳ್ಳಲಾಗಿದೆ.
ವರ್ಷದಿಂದ ವರ್ಷಕ್ಕೆ ಹಲವು ವಿಶೇಷತೆಗಳನ್ನು ಒಳಗೊಂಡು ನಡೆಯುತ್ತಿರುವ ಹಾಸನಾಂಬೆ ದೇವಿ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಈ ಬಾರಿ ನಗರದಲ್ಲಿ ಮೈಸೂರು ದಸರಾ ಮಾದರಿಯ ಚಿತ್ತಾಕರ್ಷಕ ಲೈಟಿಂಗ್ಸ್ ಅಳವಡಿಕೆ ಮಾಡಲಾಗಿದೆ.
ಈ ವರ್ಷ ಕೇವಲ 9 ದಿನಗಳು ಮಾತ್ರ ದೇವಿಯ ದರ್ಶನಕ್ಕೆ ಅವಕಾಶ ಸಿಗಲಿದದ್ದು, ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…