Mysore
32
broken clouds

Social Media

ಮಂಗಳವಾರ, 05 ಮೇ 2026
Light
Dark

ಹಾಸನ| ಫೈನಾನ್ಸ್‌ ಸಿಬ್ಬಂದಿ ಕಿರುಕುಳ ಆರೋಪ: ವಿಷ ಕುಡಿದು ರೈತ ಆತ್ಮಹತ್ಯೆ

ಹಾಸನ: ಮನೆ ಸೀಜ್‌ ಮಾಡುವುದಾಗಿ ಫೈನಾನ್ಸ್‌ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ.

ಯೋಗೇಶ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ.

ಫೈನಾನ್ಸ್‌ವೊಂದರಲ್ಲಿ ಸಾಲ ಪಡೆದಿದ್ದ ಯೋಗೇಶ್‌ ಪ್ರತಿ ತಿಂಗಳು ಸರಿಯಾಗಿ ಕಂತು ಕಟ್ಟುತ್ತಿದ್ದರು. ಆದರೆ ವೈಯಕ್ತಿಕ ಸಮಸ್ಯೆಯಿಂದ ಕಳೆದ ಎರಡು ತಿಂಗಳ ಕಂತನ್ನು ಬಾಕಿ ಉಳಿಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಮನೆಗೆ ಬಂದ ಫೈನಾನ್ಸ್‌ ಸಿಬ್ಬಂದಿ ಮನೆ ಸೀಜ್‌ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Tags:
error: Content is protected !!