ಹಾಸನ: ಮನೆ ಸೀಜ್ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ.
ಯೋಗೇಶ್ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ.
ಫೈನಾನ್ಸ್‌ವೊಂದರಲ್ಲಿ ಸಾಲ ಪಡೆದಿದ್ದ ಯೋಗೇಶ್ ಪ್ರತಿ ತಿಂಗಳು ಸರಿಯಾಗಿ ಕಂತು ಕಟ್ಟುತ್ತಿದ್ದರು. ಆದರೆ ವೈಯಕ್ತಿಕ ಸಮಸ್ಯೆಯಿಂದ ಕಳೆದ ಎರಡು ತಿಂಗಳ ಕಂತನ್ನು ಬಾಕಿ ಉಳಿಸಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಮನೆಗೆ ಬಂದ ಫೈನಾನ್ಸ್ ಸಿಬ್ಬಂದಿ ಮನೆ ಸೀಜ್ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…