ಹಾಸನ: ಕುರಿಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರುದ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರವೀಶ್ ಹಾಗೂ ಶಶಾಂಕ್ ಎಂಬುವವರೇ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ.
ಕುರಿಗಳನ್ನು ಮೈ ತೊಳೆಯಲು ಹೋಗಿ ಕೆರೆಗೆ ಇಳಿದಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.