ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಕಳೆದ ಕೆಲ ದಿನಗಳಿಂದ ದಿಂಡನೂರು ಗ್ರಾಮದಲ್ಲಿ ಚಿರತೆಗಳು ಪದೇ ಪದೇ ದಾಳಿ ನಡೆಸಿ ಬೀದಿನಾಯಿಗಳು, ಮೇಕೆ, ಕುರಿಗಳನ್ನು ತಿಂದು ಹಾಕುತ್ತಿದ್ದವು.
ಚಿರತೆ ದಾಳಿಯಿಂದ ಭಯಭೀತರಾಗಿದ್ದ ಗ್ರಾಮಸ್ಥರು ರಾತ್ರಿಯಾದರೆ ಸಾಕು ಮನೆಯಿಂದ ಹೊರಬರಲು ಭಯಪಡುತ್ತಿದ್ದರು.
ಬಳಿಕ ಅರಣ್ಯ ಇಲಾಖೆಗೆ ಮನವಿ ಮಾಡಿದ್ದ ಗ್ರಾಮಸ್ಥರು ಚಿರತೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಬೋನು ಅಳವಡಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ಚಿರತೆಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಭಾಗದಲ್ಲಿ ಮತ್ತಷ್ಟು ಚಿರತೆಗಳಿದ್ದು, ಅವುಗಳನ್ನು ಕೂಡ ಸೆರೆ ಹಿಡಿದು ಗ್ರಾಮಸ್ಥರ ಭಯ ದೂರವಾಗಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…