ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.
ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜವರಮ್ಮ ನಿಧನಕ್ಕೆ ದೇವೇಗೌಡರು ಕಂಬನಿ ಮಿಡಿದಿದ್ದಾರೆ.
ಹೊಳೆನರಸೀಪುರ ಬಸವನಾಯಕನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.




