ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು ಮುಗಿಬೀಳುತ್ತಿದ್ದಾರೆ. ಅಲ್ಲದೇ ಫೋಟೋ ತೆಗೆಯಲು, ವೀಡಿಯೋ ಮಾಡಲು ಮುಂದಾಗುತ್ತಿದ್ದಾರೆ. ಜನರ ನಡೆಯಿಂದ ಆನೆಗೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕ್ರಮಕ್ಕೆ ಮುಂದಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಎಫ್‌ಓ ಸೌರಬ್ ಕುಮಾರ್ ಅವರು ಕಾಡಾನೆ ಭೀಮ ಗ್ರಾಮ ಹಾಗೂ ತೋಟಗಳಿಗೆ ಬರುತ್ತಿದೆ. ಇಟಿಎಫ್ ತಂಡ 24 ಗಂಟೆಗಳ ಕಾಲ ಕಾಡಾನೆ ಭೀಮನನ್ನು ಗಮನಿಸುತ್ತಿದೆ. ಈಗಾಗಲೇ ಸಾರ್ವಜನಿಕರಿಗೆ ವಿನಂತಿ ಮಾಡಿ ಎಚ್ಚರಿಕೆ ಕೊಡಲಾಗಿದೆ. ಸೆಕ್ಷನ್ 216, ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ 19/70 ಪ್ರಕಾರ ಪ್ರಾಣಿಗಳಿಗೆ ತೊಂದರೆ ನೀಡುವುದು ಅಪರಾಧವಾಗಿದೆ ಎಂದು ತಿಳಿಸಿದ್ದಾರೆ.
ದಯವಿಟ್ಟು ಕಾಡು ಪ್ರಾಣಿಗಳ ಹತ್ತಿರ ಯಾರೂ ಹೋಗಬಾರದು. ನಿಮ್ಮ ಪ್ರಾಣವನ್ನು ನೀವೇ ರಕ್ಷಣೆ ಮಾಡಿಕೊಳ್ಳಬೇಕಿದೆ. ಕಾಡು ಪ್ರಾಣಿ ಕಾಡು ಪ್ರಾಣಿನೇ. ಹೀಗಾಗಿ ಜನ ಅನಾವಶ್ಯಕವಾಗಿ ಆನೆಗೆ ತೊಂದರೆ ಕೊಡಬಾರದು. ಇನ್ನು ಮುಂದೆ ಭೀಮನ ಸಮೀಪ ಹೋಗಿ ವಿಡಿಯೋ ಚಿತ್ರೀಕರಣ ಮಾಡಿದರೆ ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…