ಹಾಸನ: ಹಾಸನದಲ್ಲಿ ಗಣಪತಿ ವಿಸರ್ಜನೆ ವೇಳೆ ಟ್ರಕ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದ ಜನರ ಮೇಲೆ ಏಕಾಏಕಿ ಟ್ರಕ್ ನುಗ್ಗಿದೆ.
ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವು ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನು ಓದಿ: ನೇಪಾಳದಲ್ಲಿ ಯುವಕರ ಬಂಡಾಯ, ಹಿಂಸೆ, ಪ್ರಧಾನಿ ಪಲಾಯನ
ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ರಾತ್ರಿ 8 ರಿಂದ 8.45ರ ನಡುವೆ ಈ ದುರಂತ ಸಂಭವಿಸಿದೆ. ಆಗ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಗಣೇಶ ಹಬ್ಬದ ಅಂತಿಮ ವಿಧಿ ವಿಧಾನಗಳಲ್ಲಿ ಭಾಗವಹಿಸುತ್ತಿದ್ದರು. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಇನ್ನು ಅಪಘಾತದಲ್ಲಿ 22 ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಎಸ್.ಕುಮಾರಿ ದೃಢಪಡಿಸಿದ್ದು, ಎಲ್ಲರ ಆರೋಗ್ಯವೂ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.





