ಹಾಸನ

ಗಣೇಶ ಮೆರವಣಿಗೆ ವೇಳೆ ಟ್ರಕ್‌ ನುಗ್ಗಿದ ಪ್ರಕರಣ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಹಾಸನ: ಹಾಸನದಲ್ಲಿ ಗಣಪತಿ ವಿಸರ್ಜನೆ ವೇಳೆ ಟ್ರಕ್‌ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದ ಜನರ ಮೇಲೆ ಏಕಾಏಕಿ ಟ್ರಕ್‌ ನುಗ್ಗಿದೆ.

ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವು ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿ: ನೇಪಾಳದಲ್ಲಿ ಯುವಕರ ಬಂಡಾಯ, ಹಿಂಸೆ, ಪ್ರಧಾನಿ ಪಲಾಯನ 

ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ರಾತ್ರಿ 8 ರಿಂದ 8.45ರ ನಡುವೆ ಈ ದುರಂತ ಸಂಭವಿಸಿದೆ. ಆಗ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಗಣೇಶ ಹಬ್ಬದ ಅಂತಿಮ ವಿಧಿ ವಿಧಾನಗಳಲ್ಲಿ ಭಾಗವಹಿಸುತ್ತಿದ್ದರು. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಇನ್ನು ಅಪಘಾತದಲ್ಲಿ 22 ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಎಸ್.ಕುಮಾರಿ ದೃಢಪಡಿಸಿದ್ದು, ಎಲ್ಲರ ಆರೋಗ್ಯವೂ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇರಾನ್‌ ಮೇಲೆ ಅಮೇರಿಕಾ ಭೀಕರ ದಾಳಿ: ಟಾಪ್‌ ಕಮಾಂಡರ್‌ಗಳ ಹತ್ಯೆ

ಟೆಹರಾನ್:‌ ಟೆಹರಾನ್‌ ಮೇಲೆ ಅಮೇರಿಕಾ ನಡೆಸಿದ ಬೃಹತ್‌ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ…

8 mins ago

ಮಡಿಕೇರಿ: ಶರಣ್ಯಾಳಿಗಾಗಿ ಇಂದು ಕೂಡ ತೀವ್ರಗೊಂಡ ಶೋಧ ಕಾರ್ಯಾಚರಣೆ

ಮಡಿಕೇರಿ: ತಡಿಯಂಡಮೋಳ್‌ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…

22 mins ago

ಓದುಗರ ಪತ್ರ: ರೈಲು ಟಿಕೆಟ್ ರದ್ದತಿ ಹೊಸ ನಿಯಮದ ಬಗ್ಗೆ ಅರಿವಿರಲಿ

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…

1 hour ago

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

1 hour ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

1 hour ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

4 hours ago